
ಪ್ರಗತಿವಾಹಿನಿ ಸುದ್ದಿ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್ ಹರಿದು 9 ಜನರು ಸಾವನ್ನಪ್ಪಿರುವ ಘಟನೆ ಹಾಸನದ ಮೊಸಳೆ ಹೊಸಳ್ಳಿಯಲ್ಲಿ ನಡೆದಿದ್ದು, ದುರಂತಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಟ್ರಕ್ ಚಾಲಕ ಭುವನ್ ವಿರುದ್ಧ ಗೊರೂರು ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸದ್ಯ ಹಲ್ಲೆಗೊಳಗಾಗಿರುವ ಭುವನ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಹಾಸನದ ಮೊಸಳೆ ಹೊಸಳ್ಳಿಯಲ್ಲಿ ತಡರಾತ್ರಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಏಕಾಏಕಿ ನುಗ್ಗಿದ ಟ್ರಕ್ ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಮೆರವಣಿಗೆಯಲ್ಲಿ ಸಾಗುತ್ತಿದ್ದ ಜನರ ಮೇಲೆ ಹರಿದಿದೆ. ಸ್ಥಳದಲ್ಲೇ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.