*ನಮಗೆ ಇನ್ನೂ 20 ಸೀಟು ಸಿಕ್ಕಿದ್ದರೆ ಬಿಜೆಪಿ ನಾಯಕರು ಜೈಲಿನಲ್ಲಿ ಇರುತ್ತಿದ್ದರು: ಮಲ್ಲಿಕಾರ್ಜುನ ಖರ್ಗೆ*

ಪ್ರಗತಿವಾಹಿನಿ ಸುದ್ದಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅವರು 400 ಸ್ಥಾನ ಗೆಲ್ಲುತ್ತೀವಿ ಎಂದಿದ್ದರು. ಆದರೆ ಅವರು ಈ ಬಾರಿ 240 ಸ್ಥಾನ ಮಾತ್ರ ಗೆದ್ದಿದ್ದಾರೆ. ನಮಗೆ ಇನ್ನೂ 20 ಸೀಟು ಸಿಕ್ಕಿದ್ದರೆ ಇವರೆಲ್ಲ ಜೈಲಿನಲ್ಲಿ ಇರುತ್ತಿದ್ದರು. ಬಿಜೆಪಿ ಅವರು ಜೈಲಿನಲ್ಲಿರಲು ಅರ್ಹರು ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, 2024 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಇನ್ನೂ 20 ಸ್ಥಾನಗಳನ್ನು ಗೆದ್ದಿದ್ದರೆ, ಇನ್ನು ವಿಭಿನ್ನವಾಗಿರುತ್ತಿತ್ತು ಎಂದು ಹೇಳಿದರು.
ಉದ್ಯೋಗ ಮತ್ತು ಅಭಿವೃದ್ಧಿಯ ಭರವಸೆಯ ಮೇಲೆ ಬಿಜೆಪಿಯನ್ನು ನಂಬಬೇಡಿ. ಬದಲಿಗೆ ನಮಗೆ ಮತ ನೀಡುವ ಮೂಲಕ ಕಾಂಗ್ರೆಸ್-ಎನ್‌ಸಿ ಮೈತ್ರಿಯನ್ನು ಬಲಪಡಿಸಿ ಎಂದು ಖರ್ಗೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಇನ್ನು ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲ, ಅವರ ಹೇಳಿಕೆಗಳು ಕಾಂಗ್ರೆಸ್‌ನ ಮನಸ್ಥಿತಿಯನ್ನು ತೋರಿಸುತ್ತದೆ. ಕಾಂಗ್ರೆಸ್ ಪಕ್ಷವು ವರ್ಷಗಳ ಹಿಂದೆ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿತ್ತು ಎಂದು ಕಿಡಿಕಾರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ