Latest

ವೈದ್ಯೆ ಜೊತೆ ಖಾಸಗಿ ಬಸ್ ಕ್ಲೀನರ್ ಅಸಭ್ಯ ವರ್ತನೆ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಕ್ಲೀನರ್ ಒಬ್ಬ ಮಹಿಳಾ ವೈದ್ಯೆ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ಬೆಳಕಿಗೆ ಬಂದಿದೆ.

ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಯ ವೈದ್ಯೆ, ಬೆಂಗಳೂರಿನಿಂದ ಮಂಗಳೂರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಬಸ್ ಕ್ಲೀನರ್ ದುರ್ವರ್ತನೆ ತೋರಿದ್ದಾನೆ. ತನ್ನ ಪ್ಯಾಂಟ್ ಜಿಪ್ ತೆಗೆದು ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೇ ಪೊಲೀಸರಿಗೆ ದೂರು ನೀಡದಂತೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

Home add -Advt

ವೈದ್ಯೆ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಖಾಸಗಿ ಬಸ್ ಕ್ಲೀನರ್ ಮಹಮ್ಮದ್ ಇಮ್ರಾನ್ (26) ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಂಗಳೂರಿನ ಬಜ್ಪೆ ಕೆಂಜಾರು ನಿವಾಸಿ ಎಂದು ತಿಳಿದುಬಂದಿದೆ.

PSI ನೇಮಕಾತಿ ಹಗರಣದ ಪ್ರಮುಖ ಆರೋಪಿಗಳಿಗೆ ED ಬಿಗ್ ಶಾಕ್

https://pragati.taskdun.com/latest/psi-scamed-raidamrith-poulshantakumarhouse/

Related Articles

Back to top button