Latest

ಪಾಕ್ ಗುಪ್ತಚರ ಇಲಾಖೆಗೆ ಮಾಹಿತಿ ನೀಡುತ್ತಿದ್ದ ಹೆಚ್ ಎ ಎಲ್ ಅಧಿಕಾರಿ ಬಂಧನ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಯುದ್ಧ ವಿಮಾನಗಳ ವಿವರಗಳನ್ನು ಪಾಕಿಸ್ತಾನ ಗುಪ್ತಚರ ಇಲಾಖೆ ಐಎಸ್‍ಐಗೆ ಕಳುಹಿಸುತ್ತಿದ್ದ ಎಚ್‍ಎಎಲ್ ಉದ್ಯೋಗಿಯನ್ನು ಎಟಿಎಸ್ ಅಧಿಕಾರಿಗಳು ಬಂಧಿಸಿದ್ದಾರೆ

ಬಂಧಿತ ಹೆಚ್‍ಎಎಲ್ ಉದ್ಯೋಗಿಯನ್ನು 41 ವರ್ಷದ ದೀಪಕ್ ಶಿರ್ಸತ್ ಎಂದು ಗುರುತಿಸಲಾಗಿದೆ. ಈತ ಮುಂಬೈ ನಾಸಿಕ್ ಬಳಿಯ ಓಜರ್ ವಿಮಾನ ಘಟಕದಲ್ಲಿ ಕೆಲಸ ಮಾಡುತ್ತಿದ್ದ. ಬಂಧಿತನಿಂದ ಮೂರು ಮೊಬೈಲ್ ಫೋನುಗಳು ಮತ್ತು ಐದು ಸಿಮ್‍ಗಳು ಮತ್ತು ಎರಡು ಮೆಮೊರಿ ಕಾರ್ಡ್ ಗಳನ್ನು ವಶಕ್ಕೆ ಪಡೆಯಲಾಗಿದೆ.

Related Articles

ಈ ಕುರಿತು ಡಿಸಿಪಿ ವಿನಯ್ ರಾಥೋಡ್ ಮಾಹಿತಿ ನೀಡಿದ್ದು, ಬಂಧಿತ ದೀಪಕ್ ಶಿರ್ಸತ್ ಭಾರತೀಯ ಯುದ್ಧ ವಿಮಾನ ಮತ್ತು ಅವುಗಳ ಉತ್ಪಾದನಾ ಘಟಕದ ಬಗ್ಗೆ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನದ ಐಎಸ್‍ಐಗೆ ವಾಟ್ಸಪ್ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಕಳುಹಿಸುತ್ತಿದ್ದ ಎಂದು ತಿಳಿಸಿದ್ದಾರೆ.

Home add -Advt

Related Articles

Back to top button