Uncategorized

*ಚುನಾವಣಾ ಅಖಾಡದಿಂದ ಹಿಂದೆ ಸರಿದ ಬಿಜೆಪಿಯ ಇಬ್ಬರು ನಾಯಕರು*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಈಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಕುಂದಾಪುರ ಹಾಲಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಘೋಷಿಸಿದ್ದಾರೆ. ಈ ಮೂಲಕ ಚುನಾವಣಾ ಅಖಾಡದಿಂದ ಹಿಂದೆ ಸರಿದಿದ್ದಾರೆ.

ಸ್ವ ಇಚ್ಛೆಯಿಂದಲೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ.. ಐದು ಬಾರಿ ನನ್ನನ್ನು ಗೆಲ್ಲಿಸಿದ ಮತದಾರರಿಗೆ ಹಾಗೂ ಬಿಜೆಪಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

ಇದರ ಬೆನ್ನಲ್ಲೇ ದಾವಣಗೆರೆಯ ಬಿಜೆಪಿ ಹಿರಿಯ ಮುಖಂಡ ಎಸ್.ಎ.ರವೀಂದ್ರನಾಥ್ ಕೂಡ ತಾವು ಚುನಾವಣೆಯಿಂದ ಹಿಂದೆ ಸರಿದಿದ್ದಾಗಿ ತಿಳಿಸಿದ್ದಾರೆ. ದಾವಣಗೆರೆ ಉತ್ತರ ಕ್ಷೇತ್ರದಿಂದ ತಾವು ಸ್ಪರ್ಧೆ ಮಾಡುತ್ತಿಲ್ಲ. ಆರೋಗ್ಯ ಸರಿಯಿಲ್ಲ ಎಂಬ ಕಾರಣಕ್ಕಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಕೋರ್ ಕಮಿಟಿ ಸಭೆಯಲ್ಲಿಯೂ ನನ್ನ ನಿರ್ಧಾರವನ್ನು ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

https://pragati.taskdun.com/siddaramaiahclarificationstatment/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button