Kannada NewsKarnataka NewsPolitics

*ಹಾಫ್ ಹೆಲ್ಮೆಟ್ ಬ್ಯಾನ್ ಆಗುತ್ತಾ? ಸಚಿವರು ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಹಾಫ್ ಹೆಲ್ಮೆಟ್ ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ರಸ್ತೆ ಸುರಕ್ಷತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಮತ್ವದ ನಿರ್ಧಾರಕ್ಕೆ ಮುಂದಾಗಿದೆ.

ದ್ವಿಚಕ್ರ ವಾಹನ ಸವಾರರ ಜೀವಕ್ಕೆ ಕಂಟಕವಾಗುತ್ತಿರುವ ಹಾಫ್ ಹೆಲ್ಮೆಟ್ ಉತ್ಪಾದನೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕುವುದಕ್ಕೆ ಚಿಂತನೆ ನಡೆಸುತ್ತಿರುವುದಾಗಿ ಸಾರಿಗೆ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಭೈರತಿ ಸುರೇಶ್, ‘ಹಾಫ್ ಹೆಲ್ಮೆಟ್ ಬ್ಯಾನ್ ಮಾಡಲು ನಿಯಮಗಳಲ್ಲಿ ಅವಕಾಶ ಇದೆಯೇ ಎಂಬುದನ್ನು ಪರಿಶಿಲೀಸುತ್ತಿದ್ದೇವೆ. ಆದರೆ ಅದರ ಉತ್ಪಾದನೆ ಕಡಿಮೆ ಮಾಡುವುದು ಸಾಧ್ಯನಾ ಎಂದು ಕೂಡ ನೋಡುತ್ತೇವೆ. ಹಾಫ್ ಹೆಲ್ಮೆಟ್ ಪ್ರಮಾಣ ಕಡಿಮೆ ಮಾಡಬೇಕಿದೆ. ಅದರ ಬ್ಯಾನ್ ಬಗ್ಗೆ ನಿಯಮಗಳನ್ನು ನೋಡಿಕೊಂಡು ಮಾಡಬೇಕಿದೆ’ ಎಂದರು.

ನಗರದಲ್ಲಿ ಅರೆ ಹೆಲ್ಮೆಟ್‌ಗಳನ್ನು ಧರಿಸಿ ದ್ವಿಚಕ್ರ ವಾಹನ ಚಲಾಯಿಸುವವರ ಸಂಖ್ಯೆ ಹೆಚ್ಚುತ್ತಿದೆ. ಇಂತಹ ಹೆಲ್ಮೆಟ್‌ಗಳ ಉತ್ಪಾದನೆ ಹಾಗೂ ಮಾರಾಟದ ಮೇಲೆಯೂ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು’ ಎಂದು ಅವರು ಹೇಳಿದ್ದಾರೆ.

ರಸ್ತೆ ಸುರಕ್ಷತಾ ಮಾನದಂಡಗಳಿಗೆ ಅನುಗುಣವಾಗಿ ಇಲ್ಲದ ಹಾಫ್ ಹೆಲ್ಮೆಟ್‌ಗಳ ಉತ್ಪಾದನೆಯನ್ನೇ ನಿಷೇಧಿಸುವುದು, ಇಂತಹ ಹೆಲ್ಮೆಟ್‌ಗಳನ್ನು ತಯಾರಿಸುವ ಉತ್ಪಾದಕರು ಹಾಗೂ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮಾಡಿದ್ದೇವೆ. ಹಾಫ್ ಹೆಲ್ಮೆಟ್ ಅಗತ್ಯ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button