*ಬೆಳಗಾವಿ, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಹಾಲುಮತ ಸಮಾಜ ಕರೆ*


ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆಂದು ಹಾಲುಮತ ಸಮಾಜದ ಸಭೆ ಕರೆ ನೀಡಿದೆ.
ಯರಗಟ್ಟಿಯಲ್ಲಿ ಬುಧವಾರ ಸಮಾಜದ ಜಾಗೃತಿ ಸಮಾವೇಶ ನಡೆಯಿತು. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಹಾಲುಮತದ ಸಮಾಜದ ಮುಖಂಡರೆಲ್ಲರೂ ಸೇರಿ ಚರ್ಚಿಸಿದರು. ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಕೈಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಸರ್ವಾನುಮತದಿಂದ ಬೆಂಬಲಿಸುವಂತೆ ಕರೆ ನೀಡಲಾಯಿತು.
ಸಮಾವೇಶದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರಾದ ಕೆ.ಎಂ.ರಾಮಚಂದ್ರಪ್ಪ, ಶೋಷಿತ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಮಾವಳ್ಳಿ ಶಂಕರ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷರಾದ ಡಾ.ರಾಜೇಂದ್ರ ಸಣ್ಣಕ್ಕಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ಕಾರ್ಯಾಧ್ಯಕ್ಷರಾದ ಬಸವರಾಜ ಬಸಳಿಗುಂದಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ಉಪಾಧ್ಯಕ್ಷರಾದ ವಿನಾಯಕ ಬನಹಟ್ಟಿ, ನಿರ್ದೇಶಕರುಗಳಾ ಡಿ.ಡಿ.ಟೋಪೋಜಿ, ಅಶೋಕ್ ಮೆಟಗುಡ್, ಫಕೀರಪ್ಪ ಹದ್ದಣ್ಣವರ, ವಿಠ್ಠಲ ಪಾಟೀಲ, ಯಲ್ಲಪ್ಪ ಕುರುಬರ, ಡಾ.ಎಸ್.ಎಸ್.ಪಾಟೀಲ, ಪಡಿಯಪ್ಪ ಕ್ವಾರಿ, ಬಾಗಣ್ಣ ನರೋಟಿ, ವಸಂತ ದಳವಾಯಿ ಹಾಗೂ ಹಾಲುಮತ ಸಮಾಜದ ನೂರರು ಮುಖಂಡರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ