Kannada NewsKarnataka NewsLatest

*ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಬಳ್ಳಾರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ರೈಲಿನಲ್ಲಿ ಈ ಘಟನೆ ನಡೆದಿದೆ.

ಹಗರಿ ಗ್ರಾಮದ ಬಳಿ ರೈಲು ಚಲಿಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ತಕ್ಷಣ ರೈಲು ನಿಲ್ಲಿಸಿ ಬೆಂಕಿ ನಂದಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬೆಂಕಿ ನಂದಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

Home add -Advt


Related Articles

Back to top button