
ಪ್ರಗತಿವಾಹಿನಿ ಸುದ್ದಿ; ವಿಜಯನಗರ: ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಮಲ್ಲಿಕಾಘಂಟಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ವಿಶ್ವ ವಿದ್ಯಾಲಯಕ್ಕೆ ಆರ್ಥಿಕ ನಷ್ಟ ಉಂಟುಮಾಡಿದ್ದಾರೆ. ಉದ್ದೇಶಪೂರ್ವಕವಾಗಿ ಕೆಟಿಪಿಪಿ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಕುಲಸಚಿವ ಸುಬ್ಬಣ್ಣ ರೈ ದೂರು ದಾಖಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿಶ್ರಾಂತ ಕುಲಪತಿ ಡಾ.ಮಲ್ಲಿಕಾಘಂಟಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ