Latest

ಹಂಪಿಯಲ್ಲಿ ಭೂಕಂಪ; ಜಿಲ್ಲಾಧಿಕಾರಿ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಹೊಸಪೇಟೆ: ಐತಿಹಾಸಿಕ ಸ್ಮಾರಕ ಹಂಪಿಯಲ್ಲಿ ಇಂದು ಮುಂಜಾನೆ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಅಂತಹ ಯಾವುದೇ ಭೂಕಂಪ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.

ಇಂದು ಮುಂಜಾನೆ 6.55ರ ಸುಮಾರಿಗೆ ಹಂಪಿ ಭಾಗದಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್​ ಮಾಪಕದಲ್ಲಿ ಭೂಕಂಪನದ ತೀವ್ರತೆ ಶೇ. 4.0 ಇತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರದವರು ತಿಳಿಸಿದ್ದರು.

ಈ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಬಳ್ಳಾರಿ ಜಿಲ್ಲಾಧಿಕಾರಿ ಯಾವುದೇ ಭೂಕಂಪ ಸಂಭವಿಸಿಲ್ಲ. ಇದು ಸುಳ್ಳು ಸುದ್ದಿ ಎಂದು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಹರಿಯಾಣದ ರೋಹ್ಟಕ್​ನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿತ್ತು. ದೇಹಲಿಯಂದ ಕೇವಲ 60 ಕಿಮೀ ದೂರದಲ್ಲಿ ಈ ನಗರವಿದೆ. ಕಳೆದ ಒಂದುವರೆ ತಿಂಗಳಿಂದ ದೆಹಲಿ ಭಾಗದಲ್ಲಿ ಚಿಕ್ಕ ಪ್ರಮಾಣದಲ್ಲಿ ಭೂಮಿ ಕಂಪಿಸುತ್ತಿದೆ. ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಭೂಮಿ ಕಂಪಿಸಬಹುದು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button