
ಪ್ರಗತಿವಾಹಿನಿ ಸುದ್ದಿ: ಪ್ರವಾಸಕ್ಕೆಂದು ಬಂದಿದ್ದ ದಂಪತಿ ಹಾಗೂ ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಂಪಿಯಲ್ಲಿ ನಡೆದಿದ್ದು, ಓರ್ವ ಸಾವನ್ನಪ್ಪಿದ್ದಾರೆ.
ಕೊಟ್ಟೂರು ಮೂಲದ ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ಹಂಪಿ ಪ್ರವಾಸಕ್ಕೆ ಬಂದಿದ್ದಾರೆ. ಈ ವೇಳೆ ಕಮಲಾಪುರ ಬಳಿಇಯ ಸರಸ್ವತ್ ದೇವಸ್ಥಾನದ ಬಳಿ ಕುಳಿತು ನಾಲ್ವರು ಕ್ರಿಮಿನಾಶಕ ಸೇವಿಸಿ ತೀವ್ರ ಅಸ್ವಸ್ಥರಾಗಿ ಬಿದ್ದಿದ್ದಾರೆ. ಇದನ್ನು ಕಂಡ ಸ್ಥಳೀಯರು ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ ಪತಿ ಚಂದ್ರಯ್ಯ (43) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳು ಸಾವಿನಿಂದ ಪಾರಾಗಿದ್ದಾರೆ.
ಸೌಮ್ಯ (38), ಮಗಳು ಭವಾನಿ (12) ಹಾಗೂ ಶಿವು (10) ಬದುಕುಳಿದಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಬಳ್ಳಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.