ಒಟ್ಟು 7 ಆರೋಪಿಗಳ ಬಂಧನ
ಪ್ರಗತಿವಾಹಿನಿ ಸುದ್ದಿ: ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಾದಿಕ್ ಅಗಸಿಮನಿ ಹಾಗೂ ನಿಯಾಜ್ ಅಹ್ಮದ್ ಮುಲ್ಲಾ ಬಂಧಿತ ಆರೋಪಿಗಳು. ಈ ಮೂಲಕ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಈವರೆಗೆ 7 ಆರೋಪಿಗಳನ್ನು ಬಂಧಿಸಲಾಗಿದೆ.
ನೈತಿಕ ಪೊಲೀಸ್ ಗಿರಿ ಹೆಸರಲ್ಲಿ ತಮ್ಮದೇ ಸಮುದಾಯದ ಮಹಿಳೆಯನ್ನು ಎಳೆದೊಯ್ದ ಮುಸ್ಲಿಂ ಯುವಕರ ಗುಂಪು ಗ್ಯಾಂಗ್ ರೇಪ್ ನಡೆಸಿತ್ತು.
ಇನ್ನು ಹಾವೇರಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಸಂತ್ರಸ್ತೆ ಕುಟುಂಬದವರನ್ನು ಭೇಟಿಯಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. 7 ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಯರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ. ಯಾವುದೇ ಧರ್ಮದವರಾಗಿರಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ