ಪ್ರಗತಿವಾಹಿನಿ ಸುದ್ದಿ: ಹಾನಗಲ್ ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಾನಗಲ್ ಜೆ ಎಂ ಎಫ್ ಸಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಪ್ರಕರಣ ನಡೆದು 58 ದಿನಗಳ ಬಳಿಕ ಪೊಲೀಸರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 873 ಪುಟಗಳ ಚಾರ್ಜ್ ಶೀಟ್ ನಲ್ಲಿ 19 ಆರೋಪಿಗಳ ಹೆಸರನ್ನು ಉಲ್ಲೇಖಿಸಲಾಗಿದೆ.
ಜನವರಿ 8ರಂದು ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಮುಸ್ಲಿಂ ಮಹಿಳೆಯೊಬ್ಬರ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದರು. ಈ ಪ್ರಕರಣ ರಾಜಕೀಯವಾಗಿಯೂ ತೀವ್ರ ಚರ್ಚೆಗೆ ಕಾರಣವಾಗಿತ್ತು. ಹಾನಗಲ್ ಪೊಲೀಸರು ಒಟ್ಟು 19 ಆರೋಪಿಗಳನ್ನು ಬಂಧಿಸಿದ್ದರು. ಸಂತ್ರಸ್ತ ಮಹಿಳೆ 7 ಆರೋಪಿಗಳನ್ನು ಗುರುತಿಸಿದ್ದರು. ಘಟನೆ ನಡೆದ 58 ದಿನಗಳ ಬಳಿಕ ಈಗ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ