Kannada NewsKarnataka NewsLatest

*ಗ್ಯಾಂಗ್ ರೇಪ್ ಕೇಸ್ ಮುಚ್ಚಿಹಾಕುವ ಪೊಲೀಸರ ಪ್ರಯತ್ನ ವಿಫಲ; ಮಾಜಿ ಸಿಎಂ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣವನ್ನು ಮುಚ್ಚಿ ಹಾಕಲು ಸ್ಥಳೀಯ ಪೊಲೀಸರು ನಡೆಸಿದ್ದ ಯತ್ನ ವಿಫಲವಾಗಿರುವುದು ಬಹಿರಂಗವಾಗಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣ ಮುಚ್ಚಿ ಹಾಕಲು ಪೊಲೀಸರು ಪ್ರಯತ್ನಿಸಿದ್ದು, ಸಂತ್ರಸ್ತೆಗೆ ಹಣಕೊಟ್ಟು ಪ್ರಕರಣವನ್ನು ಹಿಂಪಡೆಯುವಂತೆ ಹೇಳಿದ್ದರು. ಈ ವಿಚಾರ ಇದೀಗ ಬಹಿರಂಗವಾಗಿದೆ ಎಂದು ಆರೋಪಿಸಿದ್ದಾರೆ.

Home add -Advt

ಸ್ಥಳೀಯ ಪೊಲೀಸರು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್ ಐಟಿ ವಹಿಸಬೇಕು ಎಂದು ಆಗ್ರಹಿಸಿದರು.


Related Articles

Back to top button