Latest

ಹಾನಗಲ್ ಉಪಚುನಾವಣೆ; ಉದಾಸಿ ಕುಟುಂಬಕ್ಕೆ ಬಿಜೆಪಿ ಬಿಗ್ ಶಾಕ್

ಪ್ರಗತಿವಾಹಿನಿ ಸುದ್ದಿ; ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಈ ಮೂಲಕ ಬಿಜೆಪಿ ಟಿಕೆಟ್ ಭರವಸೆಯಲ್ಲಿದ್ದ ಸಿ.ಎಂ ಉದಾಸಿ ಕುಟುಂಬಕ್ಕೆ ಶಾಕ್ ನೀಡಲಾಗಿದೆ.

ಹಾವೇರಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಶಿವರಾಜ್ ಸಜ್ಜನ್ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ಶಿವರಾಜ್ ಸಜ್ಜನ್, ಮಾಜಿ ಶಾಸಕರಾಗಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಆಪ್ತರಾಗಿದ್ದಾರೆ.

ಸಿ.ಎಂ.ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಕ್ಷೇತ್ರಕ್ಕೆ ಉದಾಸಿ ಪುತ್ರ ಶಿವಕುಮಾರ್ ಉದಾಸಿ ಪತ್ನಿ ರೇವತಿ ಅವರಿಗೆ ಹಾನಗಲ್ ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆ ಇತ್ತು. ಆದರೆ ಇದೀಗ ಶಿವರಾಜ್ ಸಜ್ಜನ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

ಇದೇ ವೇಳೆ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಮಾಜಿ ಶಾಸಕ ರಮೇಶ್ ಭೂಸನೂರು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.

Home add -Advt

ನಾಡಹಬ್ಬ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ

Related Articles

Back to top button