Belagavi NewsBelgaum NewsKannada NewsKarnataka News

ಕೈಮಗ್ಗ ಮತ್ತು ಜವಳಿ ಇಲಾಖೆ: ನೇಕಾರ ಕೆಲಸಗಾರರ ಗಣತಿ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ವಿದ್ಯುತ್ ಮಗ್ಗ ನೇಕಾರರ ಹಾಗೂ ಮಗ್ಗ ಪೂರ್ವ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರ ಕೆಲಸಗಾರರ ಗಣತಿ ಹಾಗೂ ಘಟಕಗಳ ಸಮಿಕ್ಷೆ ಕಾರ್ಯವನ್ನು ಅಕಾಡೆಮಿ ಆಫ್ ಮ್ಯಾನೆಜ್‌ಮೆಂಟ್ ಸ್ಟಡೀಸ್ ಸಂಸ್ಥೆಯ ಮೂಲಕ ಕೈಗೊಳ್ಳಲಾಗಿದೆ.
ಸದರಿ ಗಣತಿ ಹಾಗೂ ಘಟಕಗಳ ಸಮಿಕ್ಷೆ ಕಾರ್ಯ ಪೂರ್ಣಗೊಳ್ಳಲಿರುವ ಕಾರಣ ಸಮಿಕ್ಷೆ ಕಾರ್ಯ ಆಗದೇ ಇರುವವರು ಜು.೩೧ ೨೦೨೩ ರೊಳಗಾಗಿ ತಮ್ಮ ಮಾಹಿತಿಯನ್ನು ಬೆಳಗಾವಿ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರ ಕಛೇರಿಗೆ ನೀಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: ೦೮೩೧-೨೯೫೦೬೭೪ ಗೆ ಸಂಪರ್ಕಿಸಬಹುದು ಎಂದು ಬೆಳಗಾವಿ ಜಿಲ್ಲಾ ಪಂಚಾಯತ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Related Articles

Back to top button