
ಪ್ರಗತಿವಾಹಿನಿ ಸುದ್ದಿ: ಮಂಡ್ಯದಲ್ಲಿ ಹನುಮ ಧ್ವಜ ತೆರವು ವೇಳೆ ಪ್ರತಿಭಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಪರ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಭ್ರದ್ರತಾ ಸಿಬ್ಬಂದಿಯನ್ನು ಎಳೆದಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಪ್ರತಿಭಟನಾ ನಿರತ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ತಹಶೀಲ್ದಾರ್ ಶಿವಕುಮಾರ್ ಬಿರಾದಾರ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ.
ಬಿಳಿದೇಗುಲು ಗ್ರಾಮದ ಪ್ರತಾಪ್, ಹೊನಗವಳ್ಳಿ ಮಠ ಗ್ರಾಮದ ಅವಿನಾಶ್ , ಕೆರಗೋಡು ಗ್ರಾಮದ ಪ್ರಕಾಶ್ ಸೇರಿದಂತೆ ಹಲವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ