Kannada NewsKarnataka NewsLatest

*ಹನೂರು ಎನ್ ಕೌಂಟರ್ ಪ್ರಕರಣ: CID ತನಿಖೆಗೆ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿಗಳ ಗುಂಡೇಟಿಗೆ ಮೂವರು ಬಲಿ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾವಣೆ ಮಾಡಿದೆ.

ಪೊಲೀಸ್ ಮಹಾನಿರ್ದೇಶಕ ಸಲೀಂ ಅಹ್ಮದ್ ಅವರು ಹನೂರು ಎನ್ ಕೌಂಟರ್ ಕೇಸ್ ನ್ನು ಸಿಐಡಿ ತನಿಖೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ಮತ್ತಷ್ಟು ಚುರುಕುಗೊಳ್ಳಲಿದೆ.

ಈಗಾಗಲೇ ಹನೂರು ಎನ್ ಕೌಂಟರ್ ಪ್ರಕರಣವನ್ನು ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿತ್ತು, ಈ ತನಿಖೆಯ ವರದಿ ಇಂದು ಸರ್ಕಾರದ ಕೈಸೇರಲಿದೆ. ಈ ನಡುವೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button