Kannada NewsKarnataka NewsNationalPolitics

*ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಿದರೆ ಸಂತೋಷ: ಡಿ.ಕೆ ಶಿವಕುಮಾರ*

ಪ್ರಗತಿವಾಹಿನಿ ಸುದ್ದಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಪ್ರಸ್ತಾಪಿಸಿದ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ರಾಜಣ್ಣಗೆ ತಿರುಗೇಟು ನೀಡಿದ್ದಾರೆ.

Home add -Advt

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಿದರೆ ಸಂತೋಷ. 3 ಡಿಸಿಎಂಗಳನ್ನು ಬೇಕಾದರೂ ನೇಮಿಸಲಿ. ಇದೆಲ್ಲಾ  ಹೈಕಮಾಂಡ್ ಗೆ ಬಿಟ್ಟ ವಿಚಾರ. ನಾನೇನೂ ಇದರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.

ಕಳೆದೆರಡು ದಿನಗಳಿಂದ ಕಾಂಗ್ರೆಸ್ ಪಾಳಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಸೇರಿ ಡಿ.ಕೆ.ಶಿವಕುಮಾರ್ ವಿರುದ್ಧವೇ ಒಂದಷ್ಟು ನಾಯಕರು ಹೇಳಿಕೆ ನೀಡಿದ್ದರು. ಈ ಎಲ್ಲರಿಗೂ ಡಿ.ಕೆ.ಶಿವಕುಮಾರ್ ತಾನು ಯಾವಾಗ ಬೇಕಾದರೂ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ಸಿದ್ಧ ಎಂದು ಹೇಳುವ ಮೂಲಕ ತಕ್ಕ ತಿರುಗೇಟು ನೀಡಿದ್ದಾರೆ.

Related Articles

Back to top button