Latest

ಅರಣ್ಯ ಸಚಿವರನ್ನು ವಜಾಗೊಳಿಸಿ, ಪಕ್ಷದಿಂದಲೇ ಉಚ್ಛಾಟನೆ ಮಾಡಿದ ಸಿಎಂ

ಪ್ರಗತಿವಾಹಿನಿ ಸುದ್ದಿ; ಡೆಹ್ರಾಡೂನ್: ಉತ್ತರಾಖಂಡ ಅರಣ್ಯ ಸಚಿವ ಹರಕ್ ಸಿಂಗ್ ರಾವತ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ, ಪಕ್ಷದಿಂದಲೇ ಉಚ್ಛಾಟನೆ ಮಾಡಿ ಸಿಎಂ ಪುಷ್ಕರ್ ಸಿಂಗ್ ಧಮಿ ಆದೇಶ ಹೊರಡಿಸಿದ್ದಾರೆ.

ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಹರಕ್ ಸಿಂಗ್ ಬಿಜೆಪಿಯಲ್ಲಿದ್ದುಕೊಂಡು ಕಾಂಗ್ರೆಸ್ ನಾಯಕರ ಸಭೆಯಲ್ಲಿ ಪಾಲ್ಗೊಂಡಿದ್ದರು. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಹರಕ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಉತ್ತರಾಖಂಡದಲ್ಲಿ ಫೆ.14ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಹರಕ್ ಸಿಂಗ್ ಪದೇ ಪದೇ ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹೀಗಾಗಿ ಸಚಿವ ಸ್ಥಾನದಿಂದ ಅವರನ್ನು ವಜಾಗೊಳಿಸಬೇಕು ಎಂದು ಸಿಎಂ ಪುಷ್ಕರ್ ಧಮಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಹರಕ್ ಸಿಂಗ್ ವಜಾಗೊಂಡಿದ್ದಾರೆ.
ನಿನ್ನೆಗಿಂತ ಕುಸಿತ ಕಂಡ ಕೊರೊನಾ; ಆದರೆ ಒಮಿಕ್ರಾನ್ ಸೋಂಕು ಸ್ಫೋಟ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button