Latest

ಹರಭಜನ್ ಸಿಂಗ್ ಮತ್ತು ಪತ್ನಿ ಗೀತಾಗೆ ಕೋವಿಡ್ ಪಾಸಿಟಿವ್

ಪ್ರಗತಿವಾಹಿನಿ ಸುದ್ದಿ; ಮುಂಬೈ: ಟೀಂ ಇಂಡಿಯಾದ ಮಾಜಿ ಕ್ರಿಕೇಟರ್ ಹರಭಜನ್ ಸಿಂಗ್ ಮತ್ತು ಅವರ ಪತ್ನಿ ಗೀತಾ ಬಾಸ್ರಾ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತಪಟ್ಟಿದೆ.

ಈ ಕುರಿತು ಗೀತಾ ಬಾಸ್ರಾ ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೋವಿಡ್ ಮಹಾಮಾರಿಯಿಂದ ದೂರವಿರಲು ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೆವು. ಅತ್ಯಂತ ಜಾಗರೂಕರಾಗಿದ್ದೆವು. ಆದರೂ ಈ ದುಷ್ಟ ವೈರಸ್ ನಮ್ಮನ್ನು ಅಂಟಿತು ಎಂದು ಅವರು ಹೇಳಿಕೊಂಡಿದ್ದಾರೆ. ಹರಭಜನ್ ಕೂಡ ಗೀತಾ ಅವರ ಹೇಳಿಕೆಯನ್ನು ಟ್ವೀಟ್ ಮಾಡಿದ್ದಾರೆ.

ಆದರೆ ತಮಗೆ ಯಾವುದೇ ರೋಗ ಲಕ್ಷಣಗಳಿಲ್ಲದೆ ಆರೋಗ್ಯದಿಂದ ಇದ್ದೇವೆ ಎಂದು ಅವರು ತಿಳಿಸಿದ್ದಾರೆ.
ಕೋಹ್ಲಿಗೆ ಶೋಕಾಸ್ ನೋಟಿಸ್ ನೀಡಲು ಮುಂದಾಗಿದ್ದ ಗಂಗೂಲಿ: ಟೀಂ ಇಂಡಿಯಾಗೆ ಶಾಕ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button