Latest

ಬಿಜೆಪಿ ಸೇರ್ಪಡೆ ಬಗ್ಗೆ ಅಧಿಕೃತವಾಗಿ ಘೋಷಿಸಿದ ಹಾರ್ದಿಕ್ ಪಟೇಲ್

ಪ್ರಗತಿವಾಹಿನಿ ಸುದ್ದಿ; ಗಾಂಧಿನಗರ: ವಾರದ ಹಿಂದಷ್ಟೇ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದ ಪಾಟಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಇದೀಗ ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ಘೋಷಿಸಿದ್ದಾರೆ.

ಅಹಮದಾಬಾದ್ ನ ತಮ್ಮ ನಿವಾಸದಲ್ಲಿ ವಿಶೇಷ ಪೂಜೆ ಬಳಿಕ, ಹೇಳಿಕೆ ನೀಡಿರುವ ಹಾರ್ದಿಕ್ ಪಟೇಲ್, ರಾಷ್ಟ್ರ, ಪ್ರಾದೇಶಿಕ ಹಾಗೂ ಸಾಮಾಜಿಕ ಹಿತಾಸಕ್ತಿಯ ಭಾವನೆಯೊಂದಿಗೆ ಹೊಸದೊಂದು ಅಧ್ಯಾಯ ಆರಂಭಿಸಲಿದ್ದೇನೆ. ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಸಣ್ಣ ಯೋಧನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಪಾಟಿದಾರ್ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುವ ಮೂಲಕ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದ ಹಾರ್ದಿಕ್ ಪಟೇಲ್, 2019ರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು. ಅಯೋಧ್ಯಾ ತೀರ್ಪು, ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ಸೇರಿದಂತೆ ಕೇಂದ್ರ ಸರ್ಕಾರದ ಹಲವು ನಿರ್ಧಾರಗಳನ್ನು ಖಂಡಿಸುತ್ತಲೇ ಬಂದಿದ್ದ ಹಾರ್ದಿಕ್ ಪಟೇಲ್ ಇತ್ತೀಚೆಗಷ್ಟೇ ಬಿಜೆಪಿಯದ್ದು ನೀಚ ರಾಜಕಾರಣ ಎಂದು ಕಿಡಿಕಾರಿದ್ದರು. ಇದೀಗ ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.
ಹಿಜಾಬ್ ಧರಿಸಿ ಬಂದ 6 ಕಾಲೇಜು ವಿದ್ಯಾರ್ಥಿನಿಯರು ಅಮಾನತು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button