ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ ಕಲ್ಲಳ್ಳಿ ನೀಡಿದ್ದ ದೂರನ್ನು ದಾಖಲಿಸಿಕೊಳ್ಳದ ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಲಿದೆಯೇ?
ಅಂತಹ ಬೆಳವಣಿಗೆಯೊಂದು ಬುಧವಾರ ನಡೆದಿದೆ. ನಿರ್ಭಯಾ ಕಾಯ್ದೆಯ ಪ್ರಕಾರ ಲೈಂಗಿಕ ಶೋಷಣೆ ಸಂಬಂಧದ ದೂರು ಬಂದಲ್ಲಿ ತಕ್ಷಣ ದಾಖಲಿಸಿಕೊಳ್ಳಬೇಕು. ಆ ಕುರಿತು ಹೆಚ್ಚಿನ ವಿವರಕ್ಕಾಗಿ ಕಾಯುವಂತಿಲ್ಲ.
ರಮೇಶ ಜಾರಕಿಹೊಳಿ ಯುವತಿಗೆ ಕೆಲಸ ಕೊಡಿಸುವುದಾಗಿ ಹೇಳ ಿಲೈಂಗಿಕ ಶೋಷಣೆ ನಡೆಸಿದ್ದಾರೆ ಎಂದು ದಿನೇಶ ಕಲ್ಲಳ್ಳಿ ದೂರು ಸಲ್ಲಿಸಿದ್ದರು. ಆದರೆ ಪೊಲೀಸರು 2 ದಿನ ಕಳೆದರೂ ಈ ಕುರಿತು ಎಫ್ಐಆರ್ ದಾಖಲಿಸಿಲ್ಲ. ಈ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜನಸಂಘರ್ಷ ಪರಿಷತ್ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಮನವಿ ಸಲ್ಲಿಸಿದೆ.
ಈ ಕುರಿತು ಹೈಕೊರ್ಟ್ ಮುಖ್ಯ ನ್ಯಾಯಾಧೀಶರು ಯಾವ ಕ್ರಮ ಕೈಗೊಳ್ಳಲಿದ್ದಾರೆ ನೋಡಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ