
ವೀರಶೈವ ಲಿಂಗಾಯತ ಪಂಚಮಸಾಲಿ ಮಠದ ಟ್ರಸ್ಟ್‌ನಲ್ಲಿ 10 ಕೋಟಿ ರೂ.ಗೂ ಅಧಿಕ ಸರ್ಕಾರಿ ಅನುದಾನ ದುರ್ಬಳಕೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಇದೀಗ ಈ ಪ್ರಕರಣದ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಮಠದ ಟ್ರಸ್ಟ್ ನಲ್ಲಿ ಸರ್ಕಾರ ಬಿಡಿಗಡೆ ಮಾಡಿದ್ದ 10 ಕೋಟಿ ಅನುದಾನವನ್ನು ದುರ್ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಾಸ್ಟೆಲ್, ಸಮುದಾಯ ಭವನ ನಿರ್ಮಾಣದ 10 ಕೋಟಿ ರೂ. ಅನುದಾನ ದುರ್ಬಳಕೆಯಾಗಿದೆ ಎಂದು ಆರೋಪಿಸಿ ಮಠದ ಲೆಕ್ಕಕೊಡಿ ಸಮಿತಿ ಸದಸ್ಯರು ದೂರು ನೀಡಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜಭವನ, ಆರೋಪದ ಬಗ್ಗೆ ತಕ್ಷಣವೇ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ (CS) ಸ್ಪಷ್ಟ ಸೂಚನೆ ನೀಡಿದೆ.
ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭಾಕರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಅಧಿಕೃತ ಪತ್ರ ಬರೆದಿದ್ದಾರೆ. ಹರಿಹರ ಪಂಚಮಸಾಲಿ ಮಠಕ್ಕೆ ಬಿಡುಗಡೆಯಾದ ಅನುದಾನದ ದುರುಪಯೋಗ ಮತ್ತು ಕಾಮಗಾರಿಗಳ ಅಕ್ರಮದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ರಾಅಜ್ಯಪಾಲರ ಸೂಚನೆ ಬೆನ್ನಲ್ಲೇ ಆಡಳಿತ ಮಂಡಳಿಯಲ್ಲಿ ನಡುಕ ಶುರುವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




