LatestUncategorized

*ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು;: ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಹೊಸ ಚರ್ಚೆಗೆ ಕಾರಣವಾಗಿದೆ.

ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹರೀಶ್ ಪೂಂಜಾ, 24 ಹಿಂದು ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ. ಅಂತವರ ಪರ ಪ್ರಚಾರ ಮಾಡಿ ವೋಟ್ ಹಾಕಿದ್ದೀರಾ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪರ ಪ್ರಚಾರ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಹರೀಶ್ ಪೂಂಜಾ, ಸತ್ಯಜಿತ್ ಸುರತ್ಕಲ್ ಎಂಬ ಹಿಂದು ನಾಯಕ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾರೆ. 24 ಜನ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರ ಎಂದು ವಾಗ್ದಾಳಿ ನಡೆಸಿದ್ದಾರೆ.

https://pragati.taskdun.com/basavaraj-bommaireactiond-k-shivakumar/

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button