Latest

ಕೋವಿಡ್ ಲಸಿಕೆ ತೆಗೆದುಕೊಂಡಿದ್ದ ಆರೋಗ್ಯ ಸಚಿವರಿಗೆ ಸೋಂಕು

ಪ್ರಗತಿವಾಹಿನಿ ಸುದ್ದಿ; ಹರಿಯಾಣ: ಕೊರೊನಾ ಲಸಿಕೆ ಬಗ್ಗೆ ಇದ್ದ ಆತಂಕ ದೂರಮಾಡಲೆಂದು ಕೋವ್ಯಾಕ್ಸಿನ್ ಲಸಿಕೆಯ ಪ್ರಯೋಗಕ್ಕೆ ಸ್ವತ: ಒಳಗಾಗಿದ್ದ ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ನವೆಂಬರ್ 20ರಂದು ಪ್ರಯೋಗಾರ್ಥವಾಗಿ ಸಚಿವ ಅನಿಲ್ ವಿಜ್ ಲಸಿಕೆ ಹಾಕಿಸಿಕೊಂಡಿದ್ದರು. ಆದರೀಗ ಕೋವಿಡ್ ಟೆಸ್ಟ್ ನಲ್ಲಿ ಅವರಿಗೆ ಕೊರೊನಾ ಪಾಸಿಟೀವ್ ಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ನನಗೆ ಕೋವಿಡ್ ಪಾಸಿಟೀವ್ ಬಂದಿದ್ದು, ಅಂಬಾಲಾ ಕಾಂಟ್ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಭಾರತ್ ಬಯೋಟೆಕ್ ಸಂಸ್ಥೆ ಸಿದ್ಧಪಡಿಸುತ್ತಿರುವ ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗ ನ.20ರಿಂದ ಆರಂಭವಾಗಿದ್ದು, ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಸ್ವತ: ತಾವೇ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button