Latest

ಲಂಚ ಪ್ರಕರಣ; ಲೇಡಿ ಪಿಎಸ್ಐ ಅಮಾನತು

ಪ್ರಗತಿವಾಹಿನಿ ಸುದ್ದಿ, ವಿಜಯಪುರ: ಜಿಲ್ಲೆಯ ದೇವನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯ ಮಹಿಳಾ ಸಬ್ ಇನ್‌ಸ್ಪೆಕ್ಟರ್ ನ್ನು  ಸೇವೆಯಿಂದ ಅಮಾನತುಗೊಳಿಸಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಈ ವಿಷಯ ಖಚಿತಪಡಿಸಿದ್ದಾರೆ. ದೇವನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಈರಮ್ಮ ಲಂಚ ಪ್ರಕರಣದಲ್ಲಿ ಭಾಗಿಯಾದ ಆರೋಪದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸಲಾಗಿದೆ.

Home add -Advt

2022ರ ನ. 23ರಂದು ಪೇದೆ ಚಂದ್ರಶೇಖರ್ ಎಂಬುವರು ಶಿವಗಣೇಶ ಸರ್ಕಲ್ ಬಳಿ ಚಿಕ್ಕತತ್ತಮಂಗಲ ಗ್ರಾಮದ ಮಂಜುನಾಥ ಎಂಬುವರಿಂದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 30 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪೇದೆ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿದ್ದರು. ಅಲ್ಲದೇ ಸಬ್ ಇನ್‌ಸ್ಪೆಕ್ಟರ್ ಈರಮ್ಮ ಅವರನ್ನೂ ದೂರಿನಲ್ಲಿ ಸೇರಿಸಿ ವಿಚಾರಣೆ ನಡೆಸಿದ್ದರು.

ಈ ದೂರಿನ ವರದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಿದ್ದರು. ಮುಂದಿನ ಕ್ರಮಕ್ಕಾಗಿ ಎಸ್‌ಪಿ ಅವರು, ಐಜಿಪಿ ಅವರಿಗೆ ವರದಿ ಸಲ್ಲಿಸಿದ್ದರು.

Related Articles

Back to top button