

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಬಿ.ಕೆ ಗ್ರಾಮದ ವೈರಲೆಸ್ ಮೈದಾನದಲ್ಲಿ ಆಯೋಜಿಸಲಾಗಿರುವ ‘ಹರ್ಷ ಟ್ರೋಫಿ’ ಲಾಂಗ್ ಪಿಚ್ ಕ್ರಿಕೆಟ್ ಪಂದ್ಯಾವಳಿಯನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿ, ಮೊದಲ ಪಂದ್ಯಕ್ಕೆ ಟಾಸ್ ಮಾಡುವ ಮೂಲಕ ಭಾನುವಾರ ಚಾಲನೆ ನೀಡಿದರು.
ಸುಮಾರು ಹತ್ತು ದಿನಗಳ ಕಾಲ ಪಂದ್ಯಾವಳಿ ನಡೆಯಲಿದ್ದು, 45 ಕ್ಕೂ ಅಧಿಕ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿವೆ.
ನಾಗೇಶ್ ದೇಸಾಯಿ, ಮಹೇಶ್ ಸುಗ್ನೆಣ್ಣವರ, ಇಸ್ಮಾಯಿಲ್ ತಿಗಡಿ, ಜಮೀಲ್ ಖಾಜಿ, ಪ್ರೇಮ ಕೋಲಕಾರ್, ಅಪ್ಸರ್ ಜಮಾದಾರ್, ನೂರ್ ಅತ್ತಾರ್, ಅಲ್ತಾಫ್ ಯಾದವಾಡ, ಗಜಾನನ ಕಣಬರ್ಕರ್ ಮೊದಲಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ