*ಹರ್ಷ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದ ವೈರಲೆಸ್ ಮೈದಾನದಲ್ಲಿ ನಡೆಯುತ್ತಿರುವ ಹರ್ಷಾ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯಕ್ಕೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆ ನೀಡಿ, ಆಟಗಾರರಿಗೆ ಶುಭ ಹಾರೈಸಿದರು. ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಅತೀ ಹೆಚ್ಚು ಪ್ರೋತ್ಸಾಹ, ಸಹಕಾರ ನೀಡಲಾಗುತ್ತಿದೆ. ಯುವಕರು ಹೆಚ್ಚೆಚ್ಚು ಕ್ರೀಡೆಗಳಲ್ಲಿ ತೊಡಗಿಕೊಂಡಾಗ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗಳಿಗೆ ಸಹಕಾರವಾಗುತ್ತದೆ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು. ಅಯೋಧ್ಯೆ ಸ್ಪೋರ್ಟ್ಸ್ ಕಡೋಲಿ ಮತ್ತು … Continue reading *ಹರ್ಷ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*