ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಪಿಸಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು ಬೆಳಗಾವಿಗೆ ಆಗಮಿಸಲಿದ್ದಾರೆ.
ಹುಬ್ಬಳ್ಳಿ ಮೂಲಕ ಆಗಮಿಸುವ ಅವರು ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯಲ್ಲಿ ನಾಳೆ (ಮಾ.20) ರಾಹುಲ್ ಗಾಂಧಿ ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಯುವ ಕ್ರಾಂತಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಇಂದು ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿರುವ ಅವರು, ನಾಳೆ (ಮಾ.20)ರಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಯುವ ಕ್ರಾಂತಿ ಸಮಾವೇಶದಲ್ಲಿ ಭಾಗವಹಿಸುವರು.
ಸಂಜೆ ಬೆಂಗಳೂರಿಗೆ ತೆರಳಲಿರುವ ಡಿ.ಕೆ.ಶಿವಕುಮಾರ್ ಮಾ.21ರಂದು ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ನಡೆಯಲಿರುವ ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಳ್ಳಲಿರುವುದಾಗಿ ಅವರ ಕಚೇರಿ ಪ್ರಕಟಣೆ ತಿಳಿಸಿದೆ.