ಪ್ರಗತಿವಾಹಿನಿ ಸುದ್ದಿ; ಚಂಢೀಗಡ: ಹರ್ಯಾಣದಲ್ಲಿ ಕಳ್ಳಭಟ್ಟಿ ದುರಂತಕ್ಕೆ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.
ಹರ್ಯಾಣದ ಪಾಣಿಪತ್ ಹಾಗೂ ಸೋನಿಪತ್ ಜಿಲ್ಲೆಗಳಲ್ಲಿ ಈ ದುರಂತ ಸಂಭವಿಸಿದೆ. ಕಳ್ಳಭಟ್ಟಿ ದಂಧೆಗೆ ಇಲ್ಲಿ ಸ್ಥಳೀಯ ಅಧಿಕಾರಿಗಳೇ ಸಾಥ್ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಳ್ಳಭಟ್ಟಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹರ್ಯಾಣ ಸರ್ಕಾರ ಹೇಳಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ