
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಹರಿಯಾಣಿ ಸಿಂಗರ್ ಸಂಗೀತಾ ಅಲಿಯಾಸ್ ದಿವ್ಯಾ ಇಂದೋರಾ ಶವವಾಗಿ ಪತ್ತೆಯಾಗಿದ್ದಾರೆ.
ಹರಿಯಾಣದ ರೋಹ್ಟಕ್ ಜಿಲ್ಲೆಯ ಫ್ಲೈಓವರ್ ಸಮೀಪ ಮಣ್ಣು ಮಾಡಿದ್ದ ಮೃತದೇಹವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಮೇ 11ರಂದು ಗಾಯಕಿ ಸಂಗೀತಾ ನಾಪತ್ತೆಯಾಗಿದ್ದರು. ಇದೀಗ ಆಕೆ ಮೃತದೇಹ ಮಣ್ಣುಮುಚ್ಚಿದ ರೀತಿಯಲ್ಲಿ ಫ್ಲೈಓವರ್ ಬಳಿ ಸಿಕ್ಕಿದೆ.
ಸಂಗೀತಾ ನಾಪತ್ತೆ ಹಿನ್ನೆಲೆಯಲ್ಲಿ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಶೋಧ ಕಾರ್ಯ ಆರಂಭಿಸಿದ ಪೊಲೀಸರು ಹೋಟೆಲ್ ಒಂದರಲ್ಲಿ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದ್ದರು. ಈ ವೇಳೆ ಸಂಗೀತಾ ಜತೆ ರೋಹಿತ್ ಎಂಬ ಯುವಕ ಊಟ ಮಾಡುತ್ತಿದ್ದ ಎಂಬುದು ಗೊತ್ತಾಗಿದೆ. ಆತನ ವಿಚಾರಣೆ ನಡೆಸಿದ ಪೊಲೀಸರಿಗೆ ಪ್ರಕರಣ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧ ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪತಿ ಹಾಗೂ ಮಾವನ ವಿರುದ್ಧ ದೂರು ದಾಖಲಿಸಿದ ನಟಿ ಚೈತ್ರಾ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ