Kannada NewsKarnataka NewsLatest
*ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್*

ಪ್ರಗತಿವಾಹಿನಿ ಸುದ್ದಿ: ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಪೈಶಾಚಿಕ ಘಟನೆ ಹಾಸನದಲ್ಲಿ ನಡೆದಿದೆ.
ಕಾಮುಕರು ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಮಾಡಿ ಯುವತಿಯ ಅಣ್ಣನಿಗೆ ಕಳುಹಿಸಿ ಬೆದರಿಕೆಯೊಡ್ಡಿದ್ದಾರೆ. ಘಟನೆ ಸಂಬಂಧ ಸಂತ್ರಸ್ತೆ ಸಹೋದರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅಬ್ದುಲ್ ಅಫ್ತಾಬ್, ರಾಜಿಕ್ ಪಾಷಾ, ಉಮ್ರಾನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.