Latest

*13 ವರ್ಷದ ಬಾಲಕಿ ಗರ್ಭಿಣಿ; ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ*

ಪ್ರಗತಿವಾಹಿನಿ ಸುದ್ದಿ; ಹಾಸನ:  ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ 13 ವರ್ಷದ ಬಾಲಕಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದು, ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸ್ವಾಗತ್, ಸುದರ್ಶನ್ ಹಾಗೂ ಪಾಪಣ್ಣ ಎಂದು ಗುರುತಿಸಲಾಗಿದೆ.

ಬಾಲಕಿ ತೀವ್ರ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ಚಿಕಿತ್ಸೆಗೆ ಹೋದಾಗ ಬಾಲಕಿ ಗರ್ಭಿಣಿ ಎಂಬ ವಿಚಾರಗೊತ್ತಾಗಿದೆ. ಈ ವೇಳೆ ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಹಾಗೂ ಪೋಷಕರು ಸಕಲೇಶಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೋಷಕರು ತೋಟದಲ್ಲಿ ಕೂಲಿ ಕೆಲಸಕ್ಕೆಂದು ಬಂದಿದ್ದ ವೇಳೆ ಬಾಲಕಿ ತನ್ನ ಪೋಷಕರೊಂದಿಗೆ ಬಂದಿದ್ದಳು. ಈ ವೇಳೆ ತೋಟದ ಮಾಲೀಕ ಹಾಗೂ ಆತನ ಸಂಬಂಧಿಗಳು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಅಟ್ಟಹಾಸ ಮೆರೆದಿದ್ದಾರೆ ಎಂದು ತಿಳಿದುಬಂದಿದೆ.

*ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಘಟನೆ; ತಂದೆಯನ್ನೇ ಕೊಲೆಗೈದು, ದೇಹವನ್ನು 30 ತುಂಡುಗಳನ್ನಾಗಿ ಕತ್ತರಿಸಿ ಬಿಸಾಕಿದ್ದ ಮಗ*

https://pragati.taskdun.com/bagalakotesonmurderfather/

*ಕಾಂಗ್ರೆಸ್ ನಲ್ಲಿ ಮಹಿಳಾ CM ಬೇಡಿಕೆ ಇಟ್ಟ ಪುಷ್ಪಾ ಅಮರನಾಥ್*

https://pragati.taskdun.com/congresslady-cmpushpa-amaranathhubli/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button