Kannada NewsKarnataka NewsLatest
*ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಮದುವೆ ಸಿದ್ಧತೆಯಲ್ಲಿದ್ದ ವರ ಸ್ಥಳದಲ್ಲೇ ಸಾವು*

ಹಾಸನ: ಮದುವೆ ಸಿದ್ಧತೆಯಲ್ಲಿದ್ದ ವರ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗಾಗಿ ವಧುವನ್ನು ಕರೆತರು ಹೋಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನು.ಎಲ್.ಎನ್. (29) ಮೃತ ವರ. ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿ. ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು. ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಮದುವೆ ನಿಗದಿಯಾಗಿತ್ತು.
ಎರಡೂ ಕುಟುಂಬಗಳಲ್ಲಿಯೂ ಮದುವೆ ಸಂಭ್ರಮಕ್ಕೆ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಆದರೆ ಇಂದು ಬೆಳಿಗ್ಗೆ ಮನು ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ಕಾರಿನಲ್ಲಿ ಹೊರಟಿದ್ದರು. ಮೂಗಲಿ ಗ್ರಾಮದ ಬಳಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಮನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.



