Kannada NewsLatest

ನಿಶ್ಚಿತಾರ್ಥಕ್ಕೆ ಬಟ್ಟೆ ತರಲು ಹೊರಟಿದ್ದ ವೇಳೆ ಭೀಕರ ಅಪಘಾತ; ಯುವಕ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಹಾಸನ: ನಿಶ್ಚಿತಾರ್ಥಕ್ಕೆ ಬಟ್ಟೆ ತರಲೆಂದು ಹೊರಟಿದ್ದ ವೇಳೆ ಬೈಕ್ ಗೆ ಲಾರಿ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಉದ್ದೂರು ರಿಂಗ್ ರಸ್ತೆಯಲ್ಲಿ ನಡೆದಿದೆ.

25 ವರ್ಷದ ಮಣಿಕಂಠ ಮೃತ ವ್ಯಕ್ತಿ. ಖಾಸಗಿ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠನಿಗೆ ಮದುವೆ ನಿಶ್ಚಯವಾಗಿತ್ತು. ನಿಶ್ಚಿತಾರ್ಥಕ್ಕಾಗಿ ಬಟ್ಟೆ ತರಲೆಂದು ಹಾಸನಕ್ಕೆ ತೆರಳಿದ್ದರು. ಈ ವೇಳೆ ಹೋಂಡಾ ಆಕ್ಟೀವಾ ಬೈಕ್ ಗೆ ಲಾರಿ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Home add -Advt

ಜಿಲ್ಲೆಯಲ್ಲಿ ಸಂಭವಿಸಿದ ಮತ್ತೊಂದು ಅಪಘಾತದಲ್ಲಿ ನಿಂತಿದ್ದ ಟ್ಯಾಂಕರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಸಾಲಗಾಮೆ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸವ ಜ್ಯೋತಿಗೆ ಚಾಲನೆ ನೀಡಿದ ಶಾಸಕ ಶ್ರೀಮಂತ ಪಾಟೀಲ್

 

Related Articles

Back to top button