ಪ್ರಗತಿವಾಹಿನಿ ಸುದ್ದಿ; ಹಾಸನ: ಕಂಟೇನರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚೆನ್ನರಾಯ ಪಟ್ಟಣದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ನಾಲ್ವರು ಸ್ನೇಹಿತರು ಕಾರಿನಲ್ಲಿ ತೆರಳುತ್ತಿದ್ದರು. ಮಂಗಳೂರಿನತ್ತ ತೆರಳುತ್ತಿದ್ದ ಕಂಟೇನರ್ ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಚೆನ್ನರಾಯಪಟ್ಟಣದ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ