Karnataka NewsLatestPolitics

*ಡಿಸಿ ಲತಾಕುಮಾರಿ-ಸಚಿವ ಶಿವಲಿಂಗೇಗೌಡ ವಿರುದ್ಧದ ಲಂಚದ ಆರೋಪಕ್ಕೆ ಬಿಗ್ ಟ್ವಿಸ್ಟ್*

ಪ್ರಗತಿವಾಹಿನಿ ಸುದ್ದಿ: ಹಾಸನ ಡಿಸಿ ಲತಾಕುಮಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ವಿರುದ್ಧ ಲಂಚ ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಾಟ್ಸಾಪ್ ಚಾಟ್ ಬಿಡುಗಡೆ ಮಡಿದ್ದರು. ಇದೀಗ ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಲಂಚದ ಆರೋಪ ಪ್ರಕರಣ ಸಂಬಂಧ ಹಾಸನ ನಗರ ಪೊಲೀಸ್ ಠಾಣೆಗೆ ಜಿಲ್ಲಾಧಿಕಾರಿ ಲತಾಕುಮಾರಿ ಪಿಎ ಶಶಿಕಿರಣ್ ದೂರು ನೀಡಿದ್ದಾರೆ.

ತಮ್ಮ ಮೊಬೈಲ್ ನಂಬರ್ ಬಳಸಿ ನಕಲಿ ವಾಟ್ಸಾಪ್ ಸಂದೇಶ ಸೃಷ್ಟಿಸಿ ಹರಡಲಾಗುತ್ತಿದೆ. ಇದರಿಂದ ವೈಯಕ್ತಿಕ ವರ್ಚಸ್ಸು, ಆಡಳಿತಾತ್ಮಕವಾಗಿ ಧಕ್ಕೆ ಆಗುತ್ತಿದೆ. ಆ ಸಂದೇಶದಲ್ಲಿ ಡಿಸಿ, ಸಚಿವರು, ಅರಸೀಕೆರೆ ತಹಶೀಲ್ದಾರ್ ಸೇರಿದಂತೆ ಡಿಸಿ, ಎಸಿ , ಎಡಿಸಿ ಕಚೇರಿ ಸಿಬ್ಬಂದಿ ಹೆಸರು ಉಲ್ಲೇಖಿಸಲಾಗಿದೆ ಎಂದು ದೂರಿದ್ದಾರೆ.

ಶಶಿಕಿರಣ್ ದೂರು ಆಧರಿಸಿ BNS ಕಾಯ್ದೆ 336,(4), 335 ಅಡಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಮತ್ತೊಂದೆಡೆ ಭ್ರಷ್ಟಾಚಾರ ಆರೋಪ ಸಂಬಂಧ ಕುಮಾರಸ್ವಾಮಿ ಅವರಿಂದ ಕೆಲ ದಾಖಲೆ ಬಿಡುಗಡೆ ಬೆನ್ನಲ್ಲೇ ಕೇಂದ್ರ ಸಚಿವರಿಗೇ ಹಾಸನ ಡಿಸಿ ಕೆ.ಎಸ್.ಲತಾಕುಮಾರಿ ಕೌಂಟರ್​​ ಕೊಟ್ಟರಾ? ಎಂಬ ಪ್ರಶ್ನೆ ಮೂಡಿದೆ. ಸಿಂಹ ಮಲಗಿರುವಾಗ ನಾಯಿಗಳು ಬೊಗಳುವ ಇಮೇಜ್ ಹಾಕಿ ಪ್ರತಿಯೊಂದು ಧ್ವನಿಯೂ ಪ್ರತಿಕ್ರಿಯೆಗೆ ಅರ್ಹವಲ್ಲ ಎಂದು ತಮ್ಮ ವಾಟ್ಸಾಪ್​​, ಟ್ವಿಟರ್​​​ನಲ್ಲಿ ಪೋಸ್ಟ್​​ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.


Related Articles

Back to top button