Kannada NewsKarnataka NewsLatest

*ಫೈನಾನ್ಸ್ ಸಿಬ್ಬಂದಿಗಳಿಂದ ಮನೆ ಸೀಜ್ ಮಾಡೋದಾಗಿ ಬೆದರಿಕೆ: ನೊಂದ ರೈತ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಮನೆ ಸೀಜ್ ಮಾಡೋದಾಗಿ ಫೈನಾನ್ಸ್ ಕಂಪನಿ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಶ್ರವಣಬೆಳಗೊಳ ಬಳಿಯ ಕೊತ್ತನಘಟ್ಟ ಗ್ರಾಮದಲ್ಲಿ ನಡೆದಿದೆ. ಯೋಗೇಶ್ (50) ಆತ್ಮಹತ್ಯೆಗೆ ಶರಣಾದ ರೈತ.

ಚನ್ನರಾಯಪಟ್ಟಣದ ಫೈನಾನ್ಸ್ ಒಂದರಲ್ಲಿ 7 ಲಕ್ಷ ರೂ ಸಾಲ ಪಡೆದಿದ್ದರು. ಪ್ರತಿ ತಿಂಗಳು ಸರಿಯಾಗಿ ಕಂತು ಕಟ್ಟುತ್ತಿದ್ದರು. ಆದರೆ ಕಾರಣಾಂತರದಿಂದ ಎರಡು ತಿಂಗಳಿಂದ ಕಂತು ಕಟ್ಟಲು ಆಗಿರಲಿಲ್ಲ. ಮನೆಗೆ ಬಂದ ಫೈನಾನ್ಸ್ ಸಿಬ್ಬಂದಿ ಮನೆ ಸೀಜ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಮರ್ಯಾದಗೆ ಅಂಜಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ,

Home add -Advt

ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button