Latest

ಮತ್ತೊಂದು ಜಿಲೆಟಿನ್ ಸ್ಫೋಟ; ವ್ಯಕ್ತಿ ದುರಂತ ಅಂತ್ಯ

ಪ್ರಗತಿವಾಹಿನಿ ಸುದ್ದಿ; ಹಾಸನ: ಶಿವಮೊಗ್ಗ, ಚಿಕ್ಕಬಳ್ಳಾಪುರದಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಫೋಟ ದುರಂತ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬರು ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹೊಳೆ ನರಸಿಪುರ ಚಾಕೇನಹಳ್ಲಿ ಬಳಿ ಘಟನೆ ನಡೆದಿದೆ. ಸ್ಫೋಟಕಗಳನ್ನು ಅನ್ ಲೋಡ್ ಮಾಡುವ ವೇಳೆ ದುರಂತ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಲು ಗಣಿಗಾರಿಕೆಗಾಗಿ ಚಾಕೇನಹಳ್ಳಿ ಗೋಡೌನ್ ನಲ್ಲಿ ಜಿಲೆಟಿನ್ ಸೇರಿದಂತೆ ಹಲವು ಸ್ಫೋಟಕಗಳನ್ನು ಸಂಗ್ರಹಿಸಿಡಲಾಗಿತ್ತು. ಅಲ್ ಲೋಡ್ ಮಾಡುವ ವೇಳೆ ಈ ದುರಂತ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ದೌಡಾಯಿಸಿದ್ದಾರೆ.

Home add -Advt

Related Articles

Back to top button