ಪ್ರಗತಿವಾಹಿನಿ ಸುದ್ದಿ; ಹಾಸನ: ಎರಡು ದಿನಗಳ ಹಿಂದೆ ಹಾಸನದ ಚಾಕೇನಹಳ್ಳಿಯಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಈ ಮೂಲಕ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ನಟರಾಜ್ ಮೃತ ದುರ್ದೈವಿ. ಭಾನುವಾರ ಹೊಳೆನರಸಿಪುರದ ಚಾಕೇನಹಳ್ಳಿಯಲ್ಲಿ ಜಿಲೆಟಿನ್ ಸ್ಫೋಟಗೊಂಡ ಪರಿಣಾಮ ನಾಟರಾಜ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾರಿಯಾಗದೆ ಇದೀಗ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈಗಗಾಲೇ ಜಿಲೆಟಿನ್ ಸ್ಫೋಟ ಪ್ರಕರಣದಲ್ಲಿ ಸಂಪತ್ ಹಾಗೂ ರವಿಕುಮಾರ್ ಎಂಬುವವರು ಸಾವನ್ನಪ್ಪಿದದರು.
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಾಕ್ ನೀಡಲು ಮುಂದಾದ ಸರ್ಕಾರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ