
ಪ್ರಗತಿವಾಹಿನಿ ಸುದ್ದಿ; ಹಾಸನ: ಹಾಸನದ ಅದಿ ದೇವತೆ ಹಾಸನಾಂಬೆ ದೇಗುಲದಲ್ಲಿ ಕಾಲ್ತುಳಿತವುಂಟಾಗಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಹಾಸನಾಂಬೆ ದರ್ಶನಕ್ಕಾಗಿ ರಾಜ್ಯದ ಹಲವು ಜಿಲ್ಲೆಗಳಿಂದ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬರುತ್ತಿದ್ದಾರೆ. ದೇವರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಭಕ್ತರು ನಿಂತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದಿದೆ ಎನ್ನಲಾಗಿದೆ. ಇದರಿಂದಾಗಿ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ.
ವಿದ್ಯುತ್ ಶಾಕ್ ನಿಂದಾಗಿ ಸಂತೆಪೇಟೆ ಧರ್ಮ ದರ್ಶನ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಲ್ಲಿ ದಿಢೀರ್ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಹಲವು ಭಕ್ತರು ಕೆಳಗೆ ಬಿದ್ದಿದ್ದಾರೆ. ಹಲವು ಭಕ್ತರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹಾಸನಾಂಬೆ ದೇಗುಲದಲ್ಲಿ ದರ್ಶನಕ್ಕೆ ಜಿಲ್ಲಾಡಳಿತ ಭಕ್ತರಿಗಾಗಿ ಸರಿಯಾಗಿ ವ್ಯವಸ್ಥೆ ಮಾಡಿಲ್ಲ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ