*ಒಂದೇ ಜಿಲ್ಲೆಯಲ್ಲಿ ಒಂದೇ ದಿನ ಹೃದಯಾಘಾತಕ್ಕೆ ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. ಇಂದು ಒಂದೇ ದಿನ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಕಳೆದ ಒಂದು ತಿಂಗಳಲ್ಲಿ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಆಟೋ ಚಾಲಕರೊಬ್ಬರು ಇಂದು ಬೆಳಿಗ್ಗೆಯಷ್ಟೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇದೀಗ ಸಂಜೆ ವೇಳೆಗೆ ಬಿಎಂಟಿಸಿ ಬಸ್ ಕಂಡಕ್ಟರ್ ಓರ್ವರು ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. 37 ವರ್ಷದ ಆಟೋ ಚಾಲಕ ಗೋವಿಂದ ಹಾಗೂ ಬಿಎಂಟಿಸಿ ಬಸ್ ಕಂಡಕ್ಟರ್ 41 ವರ್ಷದ ಗಿರೀಶ್ ಮೃತರು. ಆಟೋ … Continue reading *ಒಂದೇ ಜಿಲ್ಲೆಯಲ್ಲಿ ಒಂದೇ ದಿನ ಹೃದಯಾಘಾತಕ್ಕೆ ಇಬ್ಬರು ಸಾವು*