
ಪ್ರಗತಿವಾಹಿನಿ ಸುದ್ದಿ; ಹಾಸನ: ಯಾವುದೇ ಕಾರಣಕ್ಕೂ ಇಡೀ ರಾಜ್ಯವನ್ನು ಲಾಕ್ ಡೌನ್ ಮಾಡಲ್ಲ. ಲಾಕ್ ಡೌನ್ ಮಾಡಿದರೆ ಕೊರೊನಾ ಸೋಂಕು ಮುಂದೂಡಬಹುದೇ ಹೊರತು ತಡೆಗಟ್ಟಲು ಸಾಧ್ಯವಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ನೂರಕ್ಕೆ ನೂರರಷ್ಟು ಮತ್ತೆ ರಾಜ್ಯದಲ್ಲಿ ಲಾಕ್ ಡೌನ್ ಮಾಡಲ್ಲ. ಶೇ.20ರಷ್ಟು ಜನ ಎರಡು ತಿಂಗಳವರೆಗಿನ ಆಹಾರ ಧಾನ್ಯವನ್ನು ಸಂಗ್ರಹಿಸಿದ್ದಾರೆ. ಆದರೆ ಶೇ.80ರಷ್ಟು ಬಡಜನರು, ಕೂಲಿ ಕಾರ್ಮಿಕರಿಗೆ ಆಹಾರಧಾನ್ಯ ಸಂಗ್ರಹಿಸಿಟ್ಟುಕೊಳ್ಳುವ ಸಾಮರ್ಥ್ಯವಿಲ್ಲ. ಹೀಗಾಗಿ ಸಂಪೂರ್ಣ ಲಾಕ್ ಡೌನ್ ಮಾಡಲು ಸಾಧ್ಯವಿಲ್ಲ, ಮಾಡುವುದೂ ಇಲ್ಲ ಎಂದು ಹೇಳಿದರು.
ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಗೆ ತರಬೇಕು ಎಂದು ಹಲವರು ಬೇಡಿಕೆ ಇಟ್ಟಿರುವುದರಲ್ಲಿ ತಪ್ಪಿಲ್ಲ. ಆದರೆ ಲಾಕ್ ಡೌನ್ ಜಾರಿಮಾಡುವುದುದರಿಂದ ಸೋಂಕನ್ನು ಮುಂದೂಡಬಹುದೇ ಹೊರತು ಸೋಂಕು ನಿಯಂತ್ರಣ ಮಾಡಲು ಸಾಧ್ಯವಿಲ್ಲ. ಜನರೇ ಎಚ್ಚೆತ್ತುಕೊಂಡು ತಮ್ಮ ಜಾಗೃತಿಯಲ್ಲಿರಬೇಕಾದ ಅನಿವಾರ್ಯತೆಯಿದೆ ಎಂದು ಸ್ಪಷ್ಟಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ