
ಪ್ರಗತಿವಾಹಿನಿ ಸುದ್ದಿ: ಆಸ್ಪತ್ರೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಹಾಸನದ ಮಂಜುನಾಥ್ ಆಸ್ಪತ್ರೆಯಲ್ಲಿ ನಡೆದಿದೆ.
ಹಾಸನದ ಶಣ್ಕರಮಠ ರಸ್ತೆಯಲ್ಲಿರುವ ಮಂಜುನಾಥ್ ಆಸ್ಪತ್ರೆಯಲ್ಲಿ ಎಕ್ಸರೇ ರೂಮ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ತಕ್ಷಣ ಆಸ್ಪತ್ರೆಯ ಸಿಬ್ಬಂದಿಗಳು ಕಿಟಕಿ ಗಾಜುಗಳನ್ನು ಒಡೆದಿದ್ದಾರೆ.
ಆಸ್ಪತ್ರೆಯಲ್ಲಿದ್ದ ರೋಗಿಗಳು ಗಾಬರಿಯಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಯಿಂದ ಹೊರ ತರಲಾಯಿತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. ಅದೃಷ್ಟವಶತ್ ಯಾವುದೇ ಅಪಾಯ ಸಂಭವಿಸಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ