
ಪ್ರಗತಿವಾಹಿನಿ ಸುದ್ದಿ: ವರ್ಷದಲ್ಲಿ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲು ತೆರೆಯಲಾಗಿದೆ. ಹಾಸನಾಂಬೆ ದರ್ಶನ ಪಡೆಯಲು ಲಕ್ಷಾಂತರ ಜನ ಭಕ್ತರು ಆಗಮಿಸುತ್ತಿದ್ದಾರೆ.
ಇಂದು ಮಧ್ಯಾಹ್ನ ಧಾರ್ಮಿಕ ವಿಧಿವಿಧಾಅನಗಳನ್ನು ನೆರವೇರಿಸುವ ಮೂಲಕ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ, ಜಿಲ್ಲಾಉಸ್ತುವಾರಿ ಸಚಿವ ಕೃಷ್ಣಬೈರೇಗೌಡ, ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಹಾಗೂ ಎಸ್ ಪಿ ಸಮ್ಮುಖದಲ್ಲಿ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಾಯಿತು. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಇಂದಿನಿಂದ ಅಕ್ಟೋಬರ್ 23ರವರೆಗೆ 15 ದಿನಗಳ ಕಾಲ ಹಾಸನಾಂಬೆ ದೇಗುಲದ ಬಾಗಿಲು ತೆರೆದಿರುತ್ತದೆ. ಇಂದು ಮೊದಲ ದಿನ ಮತ್ತು ಕೊನೆಯ ದಿನಗಳನ್ನು ಹೊರತುಪಡಿಸಿ ಉಳಿದ 13 ದಿನಗಳ ಕಾಲ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.