Karnataka News

*ಹಾಸನಾಂಬೆ ದರ್ಶನೋತ್ಸವದಲ್ಲಿ ಸಂಗ್ರಹವಾದ ದಾಖಲೆ ಪ್ರಮಾಣದ ಕಾಣಿಕೆಯೆಷ್ಟು?*

ಪ್ರಗತಿವಾಹಿನಿ ಸುದ್ದಿ: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಶಕ್ತಿ ದೇವತೆ ಹಾಸನಾಂಬ ದೇವಿ ದರ್ಶನೋತ್ಸವ ಸಂಪನ್ನಗೊಂಡಿದೆ. ಕಳೆದ 9 ದಿನಗಳ ಕಾಲ ನಡೆದ ಹಾಸನಾಂಬೆ ದರ್ಶನನೋತ್ಸವದಲ್ಲಿ ಹಾಸನಾಂಬೆಗೆ ಕೋಟಿ ಕೋಟಿ ರೂಪಾಯಿ ಕಾಣಿಕೆಯನ್ನು ಭಕ್ತರು ನೀಡಿದ್ದಾರೆ.

ಈ ಬಾರಿ ಹಾಸನಾಂಬೆ ದೇವಾಲಯಕ್ಕೆ ಕೋಟಿ ಕೋಟಿ ಹಣ ಹರುದುಬಂದಿದ್ದು, ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ಕಣಿಕೆ ಸಂಗ್ರಹವಾಗಿದೆ.

ಒಂಭತ್ತು ದಿನಗಳ ಕಾಲ ಹಾಸನಾಂಬೆ ದೇವಿ ದೇವಾಲಯದ ಬಾಗಿಲು ತೆರೆದಿತ್ತು. ನಿನ್ನೆ ನ.3ರಂದು ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚಿದ್ದು, ಮುಂದಿನ ವರ್ಷ ಅ.9ರಂದು ಮತ್ತೆ ಬಾಗಿಲು ತೆರೆಯಲಿದೆ. ಮತ್ತೆ ಹಾಸನಾಂಬೆ ದೇವಿ ದರ್ಶನ ಮಾಡಬೇಕೆಂದರೆ ಮುಂದಿನ ವರ್ಷದವರೆಗೆ ಕಾಯಲೆಬೇಕು.

Home add -Advt

9 ದಿನಗಳಲ್ಲಿ ಒಟ್ಟು 20 ಲಕ್ಷದ 40 ಸಾವಿರ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ಭಕ್ತರಿಗೆ 1000 ರೂ. ಹಾಗೂ 300 ರೂ. ಮೌಲ್ಯದ ಟಿಕೆಟ್ ಹಾಗೂ ಲಡ್ಡು ಪ್ರಸಾದ ವಿತರಣೆ ಮಾಡಲಾಗಿತ್ತು. ಇದರಿಂದ 9 ಕೋಟಿ 67 ಲಕ್ಷದ 27 ಸಾವಿರ ರೂಪಾಯಿ ಸಂಗ್ರಹವಾಗಿತ್ತು. ಇಂದು ಹಾಸನಾಂಬೆ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಒಟ್ಟು 12,63,83,808 ಕೋಟಿ ರೂಪಾಯಿ ಸಂಗ್ರಹವಾಗಿದೆ. 51 ಗ್ರಾಂ ಚಿನ್ನ, 913 ಗ್ರಾಂ ಬೆಳ್ಳಿ ಕಾಣಿಕೆ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.


Related Articles

Back to top button