
ಪ್ರಗತಿವಾಹಿನಿ ಸುದ್ದಿ: ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ, ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ.
ಸಿಎಂ ಪತ್ನಿ ಪಾರ್ವತಿ ತಮ್ಮ ಆಪ್ತರೊಂದಿಗೆ ಇಂದು ಹಾಸನಾಂಬೆ ದೇವಾಲಯಕ್ಕೆ ತೆರಳಿ, ಹಾಸನಾಂಬೆ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಿದ್ದೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.