LatestPolitics

*ಹಾಸನಾಂಬೆಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ಕರುಣಿಸುವ ಹಾಸನದ ಐತಿಹಾಸಿಕ ಹಾಸನಾಂಬಾ ದೇವಿಯ ಸನ್ನಿಧಿಗೆ ಇಂದು ಸಿಎಂ ಸಿದ್ದರಾಮಯ್ಯ ಆಗಮಿಸಿ, ದೇವರ ದರ್ಶನ ಪಡೆದಿದ್ದಾರೆ.

ಪ್ರತಿ ವರ್ಷ ದೀಪಾವಳಿಯ ಸಂದರ್ಭದಲ್ಲಿ 11 ದಿನಗಳ ಕಾಲ ಹಾಸನಾಂಬೆ ದರ್ಶನ ನೀಡುತ್ತಾಳೆ. ದೇವಿ ಸಾರ್ವಜನಿಕ ದರ್ಶನ 4ನೇ ದಿನಕ್ಕೆ ಕಾಲಿಟ್ಟಿದ್ದು, ಶಕ್ತಿ ದೇವತೆಯ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯ ಅವರು ಹೆಲಿಕಾಪ್ಟರ್ ಮೂಲಕ ಹಾಸನಕ್ಕೆ ಆಗಮಿಸಿ, ಹಾಸನಾಂಬೆ ಸನ್ನಿಧಿಗೆ ತೆರಳಿ ಗರ್ಭಗುಡಿಯಲ್ಲಿ ದೇವಿಯ ದರ್ಶನ ಪಡೆದಿದ್ದಾರೆ. ಸಿಎಂ ಆಗಮನದ ಹಿನ್ನೆಲೆ ದೇವಾಯದ ಆವರಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಂಸದರು, ಶಾಸಕರು ಸೇರಿದಂತೆ ಹಲವರು ಸಿಎಂಗೆ ಸಾಥ್ ನೀಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button