Latest

ಮಕ್ಕಳನ್ನು ಶಾಲೆಗೆ ಕಳುಹಿಸುವುದೇ ಬೇಡ ಎಂದ ಶಾಸಕ

ಪ್ರಗತಿವಾಹಿನಿ ಸುದ್ದಿ; ಹಾಸನ: ಕೊರೊನಾ ಸೋಂಕು ರಾಜ್ಯದಲ್ಲಿ ಹೆಚ್ಚುತ್ತಿದ್ದು, ಇಂತಹ ಸಂದರ್ಭದಲ್ಲಿ ಮಕ್ಕಳನ್ನು ಒಂದು ವರ್ಷ ಶಾಲೆಗೆ ಕಳುಹಿಸುವುದೇ ಬೇಡ. ಒಂದು ವರ್ಷ ಶಾಲೆಗೆ ಮಕ್ಕಳನ್ನು ಕಳಿಸಿಲ್ಲ ಎಂದರೆ ಏನೂ ಆಗುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಕೊರೊನಾದಂತಹ ಈ ಸಂದಿಗ್ಧ ಸ್ಥಿತಿಯಲ್ಲಿ ಸರ್ಕಾರ ಶಾಲೆಗಳನ್ನು ತೆರಯಬಾರದು ಎಂದು ಮನವಿ ಮಾಡಿದರು.

ಕೊರೊನಾ ಸೋಂಕು ಹೆಚ್ಚುತ್ತಿರುವುದನ್ನು ನೋಡಿದರೆ, ಶಾಲೆ ಆರಂಭವಾದರೆ ಪರಿಸ್ಥಿತಿ ಏನಾಗುತ್ತೆ ಎಂಬುದು ಊಹಿಸಲೂ ಸಾಧ್ಯವಿಲ್ಲ. ಹಾಸನ ಜಿಲ್ಲೆಯಲ್ಲೂ ಆಸ್ಪತ್ರೆಗಳು ತುಂಬಿ ಹೋಗುತ್ತಿವೆ. ಹೀಗಾಗಿ ರೋಗ ಲಕ್ಷಣ ಇಲ್ಲದೆ ಪಾಸಿಟಿವ್ ಬರುತ್ತಿರುವವರನ್ನು ಆಯಾ ತಾಲೂಕು ಕೇಂದ್ರದಲ್ಲೇ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಬೇಕು ಎಂದರು.

ಬಾಂಬೆಗಿಂತ ನಮಗೆ ಬೆಂಗಳೂರೇ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ ಹಾಸನ ಜಿಲ್ಲೆಯನ್ನು ಲಾಕ್‍ಡೌನ್ ಮಾಡಬೇಕು ಎಂದು ಮನವಿ ಮಾಡಿದ ಶಾಸಕರು, ಸರ್ಕಾರ ಆರ್ಥಿಕ ಪರಿಸ್ಥಿತಿ ಇಟ್ಟುಕೊಂಡು ಒದ್ದಾಡುತ್ತಿದೆ. ನಾವು ಬದುಕಿದ್ದರೆ ತಾನೇ ಆರ್ಥಿಕತೆ ಎಂದು ಕಿಡಿಕಾರಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button